Spread the love

ಅಂಧರ ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು ಮಣಿಸಿದೆ. ಈ ಮೂಲಕ ಟೀಂ ಇಂಡಿಯಾ 3ನೇ ಬಾರಿಗೆ ಟಿ20 ವಿಶ್ವಕಪ್‌ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಫೈನಲ್‌ನಲ್ಲಿ ಭಾರತ ತಂಡ 120 ರನ್‌ಗಳ ಜಯ ಸಾಧಿಸಿದೆ. ಈ ಹಿಂದೆ ಭಾರತ 2012 ಹಾಗೂ 2017ರಲ್ಲಿ ಅಂಧರ ಟಿ20 ವಿಶ್ವಕಪ್‌ ಗೆದ್ದುಕೊಂಡಿತ್ತು.

 

ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ 2 ವಿಕೆಟ್ ನಷ್ಟಕ್ಕೆ 277 ರನ್ ಗಳಿಸಿತ್ತು. ಗುರಿ ಬೆನ್ನತ್ತಿದ ಬಾಂಗ್ಲಾದೇಶ 3 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಲಷ್ಟೇ ಶಕ್ತವಾಯಿತು. ಟೀಂ ಇಂಡಿಯಾ ಆಟಗಾರರು ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಿದರು. ಭಾರತ ತಂಡದ ಪರ ಸುನಿಲ್ ರಮೇಶ್ ಮತ್ತು ಅಜಯ್ ಕುಮಾರ್ ರೆಡ್ಡಿ ಬಿರುಸಿನ ಶತಕ ಬಾರಿಸಿದರು.

ಈ ಮೂಲಕ ಟೀಂ ಇಂಡಿಯಾ ಬೃಹತ್‌ ಮೊತ್ತ ಪೇರಿಸಿತ್ತು. ಸುನಿಲ್ ರಮೇಶ್ 136 ರನ್ ಮತ್ತು ಅಜಯ್ ಕುಮಾರ್ 50 ಎಸೆತಗಳಲ್ಲಿ 100 ರನ್ ಗಳಿಸಿದರು. ಅದ್ಭುತ ಇನ್ನಿಂಗ್ಸ್‌ಗಾಗಿ ಸುನೀಲ್ ರಮೇಶ್‌ಗೆ ‘ಪಂದ್ಯ ಶ್ರೇಷ್ಠ’ ಪ್ರಶಸ್ತಿ ನೀಡಲಾಯಿತು.


Spread the love