Spread the love

ಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧ ಕೊನೆಗೊಳ್ಳುವ ಸಾಧ್ಯತೆ ಇದೆ. ಯುದ್ಧ ಕೊನೆಗೊಳಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಲವು ತೋರಿಸಿದ್ದಾರೆ.

ಉಕ್ರೇನ್ ಮೇಲೆ ಸಾರಿದ ಯುದ್ಧ ನಿಲ್ಲಿಸಲು ರಷ್ಯಾ ಚಿಂತನೆ ನಡೆಸಿದೆ. ರಾಜತಾಂತ್ರಿಕ ಮಾರ್ಗದಲ್ಲಿ ಸಮಸ್ಯೆ ಇತ್ಯರ್ಥಪಡಿಸಲು ಪುಟಿನ್ ಬಯಸಿದ್ದಾರೆ.

 

ಯುದ್ಧ ನಿಲ್ಲಿಸುವಂತೆ ಪ್ರಧಾನಿ ಮೋದಿ ಕೆಲವು ದಿನಗಳ ಹಿಂದೆಯಷ್ಟೇ ಪುಟಿನ್ ಗೆ ಮನವಿ ಮಾಡಿದ್ದರು. ಯುದ್ಧದಿಂದ ಪರಿಹಾರ ಅಸಾಧ್ಯ. ಶಾಂತಿಯುತ ಮಾತುಕತೆ ನಡೆಸಿ ಎಂದು ಸಲಹೆ ನೀಡಿದ್ದರು. ಉಭಯ ದೇಶಗಳು ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಎಂದು ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಪ್ರಧಾನಿ ಮೋದಿ ಸಲಹೆ ನೀಡಿದ್ದು, ಇದರ ಬೆನ್ನಲ್ಲೇ ರಾಜತಾಂತ್ರಿಕ ಮಾತುಕತೆಗೆ ಪುಟಿನ್ ಒಲವು ತೋರಿದ್ದಾರೆ. ಉಕ್ರೇನ್ ಮೇಲಿನ ಯುದ್ಧ ನಿಲ್ಲಿಸಲು ಚಿಂತನೆ ನಡೆಸಿದ್ದಾರೆ.


Spread the love