Spread the love

ಕೊಪ್ಪಳ: ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ರಾಜಕೀಯ ಪಕ್ಷ ಸ್ಥಾಪಿಸುವ ಮೂಲಕ ಗಂಗಾವತಿಯಿಂದ ಚುನಾವಣೆಗೆ ಸ್ಪರ್ಧಿಸುದಾಗಿ ಘೋಷಿಸಿದ್ದಾರೆ. ಯಾವುದೇ ಕಾರಣಕ್ಕೂ ಗಂಗಾವತಿಯಲ್ಲಿ ರೆಡ್ಡಿ ಗೆಲ್ಲುವುದಿಲ್ಲ ಎಂದು ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ತಿಳಿಸಿದ್ದಾರೆ.

 

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಣ್ಣ ಮುನವಳ್ಳಿ, ಜನಾರ್ಧನ ರೆಡ್ದಿ ಇಷ್ಟು ದಿನ ನಮ್ಮ ಪಕ್ಷದಲ್ಲಿ ಇದ್ದರು. ಈಗ ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ಇದರಿಂದ ನಮಗೇನೂ ನಷ್ಟವಿಲ್ಲ. ಹೊಸ ಪಕ್ಷದ ಬಗ್ಗೆ ರಾಜ್ಯ ನಾಯಕರು ತೀರ್ಮಾನ ಮಾಡುತ್ತಾರೆ ಎಂದರು.

ಗಂಗಾವತಿ ಹನುಮ ಜನಿಸಿದ ಸ್ಥಳ ಗೆಲ್ಲೋದು ನಾವೇ. ಗಂಗಾವತಿಯಿಂದ ಎರಡು ಬಾರಿ ಗೆದ್ದಿದ್ದೇನೆ. ಮತದಾರರನ್ನು ಕಡೆಗಣಿಸಲು ಆಗಲ್ಲ. ಈ ಬಾರಿಯೂ ನಾವೇ ಗೆಲ್ಲುತ್ತೇವೆ ಅದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.


Spread the love