Spread the love

ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಗೆ ಆಗ್ರಹಿಸಿ ರೈತರು ಧರಣಿ ನಡೆಸುತ್ತಿದ್ದಾರೆ. ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದ ರೈತ ಮುಖಂಡರನ್ನು ರಾತ್ರೋರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪೊಲೀಸರ ನಡೆ ಖಂಡಿಸಿ ಬೆಳಗಾವಿ ಮಾರ್ಕೆಟ್ ಠಾಣೆ ಎದುರು ರೈತರು ಧರಣಿ ನಡೆಸಿದ್ದು ಮುಖಂಡರನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಈ ವೇಳೆ ಪೊಲೀಸ್ ಠಾಣೆಯ ಬಳಿ ರೈತರು ಮತ್ತು ಪೊಲೀಸರ ನಡುವೆ ನೂಕಾಟ, ತಳ್ಳಾಟ ನಡೆದಿದ್ದು, 8 ಕ್ಕೂ ಅಧಿಕ ರೈತರನ್ನು ಠಾಣೆಯಿಂದ ಬೇರೆ ಕಡೆಗೆ ಸ್ಥಳಾಂತರ ಮಾಡಲಾಗಿದೆ.


Spread the love

By admin