ಬಾಗಲಕೋಟೆ: ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದಿದ್ದು, ಶಾಸಕರ ವಿರುದ್ಧ ತನಿಖೆ ನಡೆಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ತೇರದಾಳದ ಹಳಿಂಗಳಿ ನಿವಾಸಿ ರಾಜು ದೇಸಾಯಿ ಎಂಬುವವರು ಆಸ್ತಿ ಪಹಣಿ ಪತ್ರದ ಸಮೇತ ಸಿದ್ದು ಸವದಿ ವಿರುದ್ಧ ಆರೋಪ ಮಾಡಿದ್ದಾರೆ.
ಮೂರು ವರ್ಷಗಳಲ್ಲಿ ಶಾಸಕರು ನೂರಾರು ಎಕರೆ ಭೂಮಿ ಖರೀದಿ ಮಾಡಿದ್ದಾರೆ. 156 ಎಕರೆ ಜಮೀನು ಖರೀದಿಸಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
3 ವರ್ಷದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಜಮೀನು ಖರೀದಿಗೆ ಶಾಸಕರ ಹಣದ ಮೂಲ ಯಾವುದು? ಈ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.