Spread the love

ಬೆಳಗಾವಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿಯಲ್ಲಿ ಜನಾರ್ಧನ ರೆಡ್ಡಿ ವಿರುದ್ಧ ಚುನಾವಣಾ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಶ್ರೀರಾಮುಲು, ನಮ್ಮದು ರಾಷ್ಟ್ರೀಯ ಪಕ್ಷ, ಪಕ್ಷ ತಾಯಿಯಿದ್ದಂತೆ. ಬಿಜೆಪಿ ಅಧಿಕಾರಕ್ಕೆ ತರುವುದೇ ನಮ್ಮ ಗುರಿ ಎಂದು ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ಬಿಜೆಪಿಯಿಂದ ಈವರೆಗೆ ನಮಗೆ ಟಾಸ್ಕ್ ಏನೂ ಕೊಟ್ಟಿಲ್ಲ. ಆದರೆ 2023ಕ್ಕೆ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ಬಿಜೆಪಿ ಏನೇ ಕೆಲಸ ಹೇಳಿದರೂ ನಿಷ್ಠೆಯಿಂದ ಮಾಡುತ್ತೇನೆ ಎಂದರು.

ಕಾಂಗ್ರೆಸ್ ನಾಯಕರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಜನಾರ್ಧನ ರೆಡ್ಡಿ ಹೊಸ ಪಕ್ಷ ರಚನೆಗೂ ನಮಗೂ ಯಾವುದೇ ಸಂಬಂಧವಿಲ್ಲ. ಸ್ನೇಹವೇ ಬೇರೆ, ರಾಜಕಾರಣವೇ ಬೇರೆ. ಸ್ನೇಹ ಹಾಗೂ ರಾಜಕಾರಣವನ್ನು ಒಂದೇ ತಟ್ಟೆಯಲ್ಲಿಟ್ಟು ತೂಗಬೇಡಿ. ರಾಜಕೀಯದ ಹೊರತಾಗಿ ಸ್ನೇಹ ಯಾವತ್ತೂ ಇದ್ದೇ ಇರುತ್ತದೆ. ಆದರೆ ನಮ್ಮ ಪಕ್ಷದ ಸಿದ್ಧಾಂತಗಳು ಬೇರೆ ಹಾಗಾಗಿ ಪಕ್ಷದ ಸಿದ್ಧಾಂತಕ್ಕೆ ಬದ್ಧನಾಗಿ ಕೆಲಸ ಮಾಡುತ್ತೇನೆ. ನನಗೆ ಬಿಜೆಪಿ ಮಂತ್ರಿ ಸ್ಥಾನವನ್ನು, ಎಲ್ಲಾ ಅವಕಾಶಗಳನ್ನೂ ನೀಡಿದೆ. ಹೀಗಿರುವಾಗ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲ. ಬಿಜೆಪಿಯನ್ನು ಮತ್ತೆ ಅಧಿಕಾ


Spread the love

By admin