Spread the love

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಬದಿ ನಿಂತಿದ್ದ ಮೂರು ಖಾಸಗಿ ಬಸ್ ಗಳು ಇದ್ದಕ್ಕಿದ್ದಂತೆ ಬೆಂಕಿಗಾಹುತಿಯಾದ ಘಟನೆ ಮೈಸೂರು ರಸ್ತೆಯಲ್ಲಿ ನಡೆದಿದೆ.

ಮೈಸೂರು ರಸ್ತೆಯಲ್ಲಿರುವ ಆರ್.ವಿ. ಎಂಜಿನಿಯರಿಂಗ್ ಕಾಲೇಜು ಬಳಿ ನಿಂತಿದ್ದ ಎಸ್.ಆರ್.ಎಸ್ ಟ್ರಾವೆಲ್ಸ್ ನ ಮೂರು ಬಸ್ ಗಳಿಗೆ ಬೆಂಕಿ ಬಿದ್ದಿದ್ದು, ನೋಡ ನೋಡುತ್ತಿದ್ದಂತೆಯೇ ಮೂರು ಬಸ್ ಗಳು ಹೊತ್ತಿ ಉರಿದಿದೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

By admin