Spread the love

ಬೆಳಗಾವಿ: ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರದಲ್ಲಿ ಕೈಗೊಂಡ ನಿರ್ಣಯದ ವಿರುದ್ಧ ವಿಧಾನ ಪರಿಷತ್ ನಲ್ಲಿ ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ.

ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಖಂಡನಾ ನಿರ್ಣಯ ಮಂಡಿಸಿದ್ದರು. ಇದನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

 

ಮಹಾರಾಷ್ಟ್ರ ರಾಜ್ಯ ಸರ್ಕಾರದ ನಿರ್ಣಯವನ್ನು ಖಂಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುವರ್ಣಸೌಧದಲ್ಲಿ ಮಾತನಾಡಿದ ಸಿಎಂ, ನಮ್ಮ ರಾಜ್ಯದ ಒಂದಿಂಚೂ ಭೂಮಿ ಬಿಟ್ಟು ಕೊಡುವುದಿಲ್ಲ ಎಂದು ಹೇಳುತ್ತೇವೆ. ಆದರೆ, ಮಹಾರಾಷ್ಟ್ರದವರು ನಮ್ಮ ರಾಜ್ಯದ ಭೂಮಿ ಕೇಳುತ್ತಿದ್ದಾರೆ. ಬೆಳಗಾವಿ, ಬಾಲ್ಕಿ, ಕಾರವಾರ ಸೇರಿದಂತೆ ಹಲವು ಪ್ರದೇಶಗಳನ್ನು ಕೇಳುತ್ತಿದ್ದಾರೆ. ಗಡಿ ವಿವಾದ ವಿಚಾರ ಸುಪ್ರೀಂ ಕೋರ್ಟ್ ನಲ್ಲಿ ಇದೆ. ಹೀಗಿದ್ದರೂ, ರಾಜಕೀಯ ಕಾರಣಗಳಿಗಾಗಿ ಗಡಿ ವಿವಾದ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.


Spread the love

By admin