Spread the love

ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ.ಎರಡು ಗುಂಪುಗಳ ನಡುವೆ ಗಲಾಟೆ ಆರಂಭವಾಗಿ ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ.

ಘರ್ಷಣೆಯಲ್ಲಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ 5 ಬೈಕ್ ಗಳು, 1 ಕ್ರೂಸರ್, 2 ಗೂಡ್ಸ್ ವಾಹನಗಳು ಜಖಂಗೊಂಡಿವೆ. ಘಟನಾ ಸ್ಥಳಕ್ಕೆ ತಾಳಿಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

By admin