Spread the love

ಬೆಂಗಳೂರು: ಬೆಂಗಳೂರಿನಲ್ಲಿ ಲಿಫ್ಟ್ ಕುಸಿದು ಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಕೂಲಿ ಕಾರ್ಮಿಕ ರಮೇಶ್(32) ಮೃತಪಟ್ಟವರು ಎಂದು ಹೇಳಲಾಗಿದೆ.

ಲಿಫ್ಟ್ ಕುಸಿದು ಅವರು ದುರ್ಮರಣಕ್ಕೀಡಾಗಿದ್ದಾರೆ.

ತಿಗಳರ ಪಾಳ್ಯದ ಅಪ್ನಾ ಮೆಡಿಕಲ್ ಪ್ರೈವೇಟ್ ಲಿಮಿಟೆಡ್ ಬಿಲ್ಡಿಂಗ್ ನಲ್ಲಿ ಘಟನೆ ನಡೆದಿದೆ. ಅನ್ಮೋಲ್, ನಿಶ್ಚಿತ್, ಪುನೀತ್, ಪ್ರದೀಪ್ ಎಂಬುವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಡಿಕಲ್ ವೇರ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಇವರಾಗಿದ್ದು, ಓಪನ್ ಲಿಫ್ಟ್ ನಲ್ಲಿ ಔಷಧಿ ಸಾಗಿಸಿ ಕೆಳಕ್ಕೆ ಬರುತ್ತಿದ್ದ ವೇಳೆ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Spread the love

By admin