Spread the love

ಬೆಂಗಳೂರು: ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೇಲೂರು ಹೋಬಳಿಯ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ನಿವೃತ್ತ ಶಿಕ್ಷಕ ಎಂ. ಮಹದೇವಯ್ಯ ಎಂಬುವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣದಲ್ಲಿ ಮೂರನೇ ಆರೋಪಿಯಾದ ಮಹದೇವಯ್ಯ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರ ರಜಾಕಾಲದ ನ್ಯಾಯಪೀಠ ಈ ಆದೇಶ ಮಾಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಚಂದ್ರಮೌಳಿ ವಾದ ಮಂಡಿಸಿ, ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಮೃತ ಸ್ವಾಮೀಜಿ ಬರೆದ ಮರಣ ಪತ್ರದಲ್ಲಿ ಅರ್ಜಿದಾರರ ಹೆಸರು ಉಲ್ಲೇಖವಾಗಿಲ್ಲ.

ಸ್ವಾಮೀಜಿ ಜೊತೆಗಿನ ಮಾತುಕತೆ ಕುರಿತ ದೃಶ್ಯಗಳನ್ನು ಒಳಗೊಂಡ ಪೆನ್‌ಡ್ರೈವ್ ಅನ್ನು ಎರಡನೇ ಆರೋಪಿಯಿಂದ ಪಡೆದು ನಾಲ್ಕನೇ ಆರೋಪಿಗೆ ನೀಡಿದ ಆರೋಪ ಮಹದೇವಯ್ಯ ಅವರ ಮೇಲಿದೆ ಅಂದ ಮಾತ್ರಕ್ಕೆ ಸ್ವಾಮೀಜಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧ ಕೃತ್ಯ ಎಸಗಿದಂತಾಗುವುದಿಲ್ಲ. ಆದ್ದರಿಂದ ಅರ್ಜಿದಾರರಿಗೆ ಜಾಮೀನು ನೀಡಬೇಕು ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿದಾರರಿಗೆ ಜಾಮೀನು ನೀಡಿ ಆದೇಶಿಸಿದೆ.


Spread the love

By admin