ಬೆಂಗಳೂರು: ರಾಜ್ಯದಲ್ಲಿ ರೂಪಾಂತರಿ ವೈರಸ್ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವಿದೇಶದಿಂದ ಆಗಮಿಸಿರುವ ಮತ್ತೆ ಮೂವರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.ಡಿಸೆಂಬರ್ 27 ಹಾಗೂ 28ರಂದು ವಿದೇಶದಿಂದ ಆಗಮಿಸಿದವರಿಗೆ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು.
ಅವರಲ್ಲಿ ಮೂವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ವಿದೇಶದಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ 107 ಜನರಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಅವರಲ್ಲಿ ಹಾಂಕಾಂಗ್, ಅಬುದಾಬಿ ಹಾಗೂ ದುಬೈನಿಂದ ಆಗಮಿಸಿರುವ ಮೂವರಲ್ಲಿ ಸೋಂಕು ಪತ್ತೆಯಾಗಿದೆ. ಮೂವರನ್ನು ಕ್ವಾರಂಟೈನ್ ಮಾಡಿ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಲಾಗಿದೆ.