Spread the love

ಪ್ರಧಾನಿ ಮೋದಿ ಅವರ ತಾಯಿ ಹೀರಾ ಬೆನ್ ನಿಧನಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಅವರ ಪತ್ನಿ ಜಿಲ್ ಬೈಡೆನ್ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಮೋದಿ ಮತ್ತು ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

 

ನಿನ್ನೆ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ನಿಧನರಾಗಿದ್ದು, ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಜೋ ಬೈಡೆನ್ ಮತ್ತು ಪ್ರಥಮ ಮಹಿಳೆ ಜಿಲ್ ಬೈಡೆನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ ಸಂತಾಪ ಸೂಚಿಸಿದ್ದಾರೆ.

ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಜೋ ಬಿಡೆನ್, “ಜಿಲ್ ಮತ್ತು ನಾನು ಅವರ ತಾಯಿ ಹೀರಾಬೆನ್ ಮೋದಿಯವರನ್ನು ಕಳೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಮ್ಮ ಸಂತಾಪವನ್ನು ಕಳುಹಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮ ಪ್ರಾರ್ಥನೆಗಳು ಪ್ರಧಾನಿ ಮತ್ತು ಅವರ ಕುಟುಂಬದೊಂದಿಗೆ ಇವೆ ಎಂದು ಹೇಳಿದ್ದಾರೆ.

ಭಾರತದಲ್ಲಿರುವ ಚೀನಾ ರಾಯಭಾರ ಕಚೇರಿ ಕೂಡ ಹೀರಾ ಬೆನ್ ನಿಧನಕ್ಕೆ ಸಂತಾಪ ಸೂಚಿಸಿದೆ. ಪ್ರೀತಿಯ ತಾಯಿ ಹೀರಾಬೆನ್ ಮೋದಿಯವರ ನಿಧನಕ್ಕೆ ಪ್ರಧಾನಮಂತ್ರಿ ಮೋದಿ ಅವರಿಗೆ ಸಂತಾಪಗಳು. ದುಃಖದಲ್ಲಿರುವ ಕುಟುಂಬಕ್ಕೆ ಶಕ್ತಿ ದೊರೆಯಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಾರತದಲ್ಲಿನ ಚೀನಾ ರಾಯಭಾರ ಕಚೇರಿ ಟ್ವೀಟ್ ಮಾಡಿದೆ.

ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಕೂಡ ಶುಕ್ರವಾರ ತಾಯಿ ಹೀರಾಬೆನ್ ಅವರ ನಿಧನಕ್ಕೆ ಪ್ರಧಾನಿ ಮೋದಿ ಅವರಿಗೆ ಸಂತಾಪ ಸೂಚಿಸಿದ್ದಾರೆ. ತಾಯಿಯನ್ನು ಕಳೆದುಕೊಳ್ಳುವುದಕ್ಕಿಂತ ದೊಡ್ಡ ನಷ್ಟವಿಲ್ಲ. ಅವರ ತಾಯಿಯ ನಿಧನಕ್ಕೆ ಪ್ರಧಾನಿ ಮೋದಿ ಅವರಿಗೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.


Spread the love

By admin