Spread the love

ವಿಜಯಪುರ: ವೇಗವಾಗಿ ಚಲಿಸುತ್ತಿದ್ದ ಕಾರು ಮತ್ತು ಬೈಕ್​ಗೆ ಹೊಡೆದು ಬಳಿಕ ರಸ್ತೆ ಬದಿಯ ಸೇತುವೆಗೆ ಡಿಕ್ಕಿಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನಂದಿಹಾಳ ಕ್ರಾಸ್ ಬಳಿ ನಡೆದಿದೆ. ಬಿ.ಎಸ್ ಪಾಟೀಲ್ (59) ಮೃತಪಟ್ಟ ವ್ಯಕ್ತಿ.

ಕಾರಿನಲ್ಲಿದ್ದ ಇತರೆ ಮೂವರು ಮತ್ತು ಬೈಕ್ ಸವಾರ ಸೇರಿದಂತೆ ನಾಲ್ವರಿಗೆ ಗಾಯಗಳಾಗಿವೆ. ಕಾರಿನಲ್ಲಿದ್ದವರು ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ‌ ಚನ್ನೂರ ಗ್ರಾಮದವರು ಎಂದು ಹೇಳಲಾಗುತ್ತಿದೆ. ಮನಗೂಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

By admin