Spread the love

ರಾವಳಿಯ ಪ್ರತಿಭಾನ್ವಿತ ನಟ ರೂಪೇಶ್ ಶೆಟ್ಟಿ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಗಿರಿಗಿಟ್ ಚಿತ್ರದ ತುಳುನಾಡಿನ ಪ್ರೇಕ್ಷಕರ ಮನಗೆದ್ದ ನಟ ಈಗ ಬಿಗ್ ಬಾಸ್ ವಿನ್ನರ್ ಆಗಿದ್ದಾರೆ.

ಒಟಿಟಿ ಮೂಲಕ ಕಾಲಿಟ್ಟ ರೂಪೇಶ್ ಶೆಟ್ಟಿ, ಟಿವಿ ಬಿಗ್ ಬಾಸ್‌ನಲ್ಲಿಯೂ ಸ್ಪರ್ಧಿಯಾಗಿ ಪೈಪೋಟಿ ನೀಡಿದ್ದರು.

ಒಟಿಟಿ ಟಾಪರ್ ಆಗಿದ್ದ ರೂಪೇಶ್ ಶೆಟ್ಟಿ ಈಗ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿದ್ದಾರೆ.

ರಾಕೇಶ್ ಅಡಿಗಗೆ ಟಫ್ ಫೈಟ್ ಕೊಟ್ಟು, ಬಿಗ್ ಬಾಸ್ ವಿನ್ನರ್ ಟೈಟಲ್ ಅನ್ನ ತಮ್ಮದಾಗಿಸಿಕೊಂಡಿದ್ದಾರೆ. ರಾಕೇಶ್ ಅಡಿಗ ರನ್ನರ್ ಅಪ್ ಆಗುವ ಮೂಲಕ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.

ಈ ಬಾರಿ ‘ಬಿಗ್ ಬಾಸ್​​ ಕನ್ನಡ’ ಗೆದ್ದಿರುವ ರೂಪೇಶ್ ಶೆಟ್ಟಿಗೆ 60 ಲಕ್ಷ ರೂಪಾಯಿ ಸಿಕ್ಕಿದೆ. ಈ ಬಹುಮಾನದ ಮೊತ್ತಕ್ಕೆ ಶೇ.30 ಟ್ಯಾಕ್ಸ್ ಬೀಳಲಿದೆ. 60 ಲಕ್ಷ ರೂಪಾಯಿಯಲ್ಲಿ 18 ಲಕ್ಷ ರೂ. ಕಟ್ ಆಗಲಿದೆ. ಅಂದರೆ ರೂಪೇಶ್ ಶೆಟ್ಟಿಗೆ 42 ಲಕ್ಷ ರೂಪಾಯಿ ಸಿಗಲಿದೆ. ರೂಪೇಶ್ ಶೆಟ್ಟಿ ಗೆಲವು ಕನ್ನಡಿಗರಿಗೆ, ತುಳುನಾಡಿನ ಅಭಿಮಾನಿಗಳಿಗೆ ಖುಷಿ ನೀಡಿದೆ.


Spread the love

By admin