Spread the love

ಚಿಕ್ಕಬಳ್ಳಾಪುರ : ಹೊಸವರ್ಷಾಚರಣೆಯ ಸಂಭ್ರಮದಲ್ಲಿ ಪಾರ್ಟಿ ಮಾಡುವ ವೇಳೆ ಕುಡಿದ ಮತ್ತಿನಲ್ಲಿ ವ್ಯಕ್ತಿಗೆ ಬಿಯರ್ ಬಾಟಲಿಯಿಂದ ಇರಿದು ಬರ್ಬರ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಐಮರೆಡ್ಡಿಹಳ್ಳಿ ಗ್ರಾಮದ ಐಮರೆಡ್ಡಿಹಳ್ಳಿಯ ಮಂಜಮ್ಮ ಡಾಬಾದಲ್ಲಿ ನಡೆದಿದೆ.

ದೊಡ್ಡ ಗಂಜೂರಿನ ನವೀನ್ (28)ಕೊಲೆಯಾದ ದುರ್ದೈವಿ ಯಾಗಿದ್ದು.ನೂತನ ಹೊಸ ವರ್ಷಾಚರಣೆಗೆ ಸ್ನೇಹಿತರೊಂದಿಗೆ ಪಾರ್ಟಿ ಮಾಡುವ ವೇಳೆ ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ..

ಗಲಾಟೆ ವಿಕೋಪಕ್ಕೆ ತಿರುಗಿ ಪರಸ್ಪರ ಹೊಡೆದಾಡಿಕೊಂಡಿದ್ದು ಈ ವೇಳೆ ಸ್ನೇಹಿತರು ನವೀನ್ ತಲೆಗೆ ಬಿಯರ್ ಬಾಟಲಿಯಿಂದ ಒಡೆದು ಅದೇ ಬಾಟಲಿಯ ಚೂಪಾದ ಗಾಜಿನಿಂದ ಇರಿದು ಕೊಲೆ ಬರ್ಬರವಾಗಿ ಕೊಲೆ ಮಾಡಿದ್ದಾರೆ.. ಇನ್ನು ಘಟನೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ಬೇಟೆ ಪರಿಶೀಲನೆ ನಡೆಸುತ್ತಿದ್ದು. ಪೊಲೀಸರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.


Spread the love

By admin