ಬೆಂಗಳೂರು: ಕುಟುಂಬ ರಾಜಕಾರಣ, ಭ್ರಷ್ಟಾಚಾರ, ಜಾತಿವಾದಕ್ಕೆ ಬ್ರೇಕ್ ಹಾಕಲು ಬಿಜೆಪಿ ಅಧಿಕಾರಕ್ಕೆ ತನ್ನಿ ಎಂದು ಕೇಂದ್ರ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾತನಾಡಿದ ಅವರು, ಜೆಡಿಎಸ್ ಕಾಂಗ್ರೆಸ್ ಚುನಾವಣೆ ಹತ್ತಿರ ಬರುತ್ತಾ ಇದ್ದಂತೆ ಒಟ್ಟಿಗೆ ಕೂರುತ್ತಾರೆ.
ಅವರ ಆಡಳಿತ ನೋಡಿದ್ದೀರಿ. ಯಡಿಯೂರಪ್ಪ ಮತ್ತು ಬೊಮ್ಮಾಯಿ ಯಶಸ್ವಿ ಆಗಿ ಸರ್ಕಾರ ನಡೆಸಿದ್ದಾರೆ. ದಕ್ಷಿಣದಲ್ಲಿ ಬಿಜೆಪಿಯನ್ನು ಬಲಿಷ್ಠ ಮಾಡಬೇಕಿದೆ.
ದಕ್ಷಿಣ ಭಾರತಕ್ಕೆ ಕರ್ನಾಟಕ ಹೆಬ್ಬಾಗಿಲು. ಕರ್ನಾಟಕದ ಮೂಲಕ ದಕ್ಷಿಣ ಭಾರತಕ್ಕೆ ಬಿಜೆಪಿ ಪ್ರವೇಶಿಸುತ್ತಿದೆ ಎಂದು ಹೇಳಿದರು. ಇನ್ನೂ ಬಿಜೆಪಿ ಯಾರ ಜೊತೆಯೂ ಹೊಂದಾಣಿಕೆ ಮಾಡಿಕೊಳ್ಳಲ್ಲ. ಮಾಜಿ ಪ್ರಧಾನಿ ದೇವೇಗೌಡ, ಸಿದ್ದರಾಮಯ್ಯ ಹೆಸರು ಪ್ರಸ್ತಾಪಿಸಿ ಏರುಧ್ವನಿಯಲ್ಲಿ ವಾಗ್ದಾಳಿ ನಡೆಸಿದ ಅಮಿತ್ ಶಾ, ಕಾಂಗ್ರೆಸ್ ತುಕ್ಡೇ ತುಕ್ಡೇ ಗ್ಯಾಂಗ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಜೆಡಿಎಸ್ ಚುನಾವಣೆ ಬಂದಾಗ ಬಿಜೆಪಿ ಜೊತೆ ಒಪ್ಪಂದದ ಬಗ್ಗೆ ಮಾತನಾಡುತ್ತದೆ. ಆದರೆ ಬಿಜೆಪಿ ಏಕಾಂಗಿಯೇ ಚುನಾವಣೆ ಎದುರಿಸಲಿದೆ. ಏಕಾಂಗಿಯಾಗಿಯೇ ಅಧಿಕಾರಕ್ಕೆ ಬರಲಿದೆ. ಯಾರ ಜೊತೆಯೂ ಯಾವ ಹೊಂದಾಣಿಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.