Spread the love

ಬೆಂಗಳೂರು: ಪ್ರಸ್ತುತ ಜಗತ್ತಿನಲ್ಲಿ ಮಾಧ್ಯಮ ಎನ್ನುವುದು ಅತ್ಯಂತ ಪ್ರಮುಖ ಸಂವಹನ ಕ್ಷೇತ್ರವಾಗಿದ್ದು, ಇದು ಜೀವಂತವಾಗಿರದೇ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ವತಿಯಿಂದ ಶನಿವಾರ ಆಯೋಜಿಸಿದ್ದ 2022ನೇ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವರ್ಷದ ವ್ಯಕ್ತಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಮಾಧ್ಯಮಗಳು ಸಮಾಜದಲ್ಲಿ ನಡೆಯುವ ತಪ್ಪುಗಳನ್ನು ಪತ್ತೆ ಹಚ್ಚಿ ಸಾರ್ವಜನಿಕರಿಗೆ ತಿಳಿಸುವ ಕೆಲಸ ಮಾಡಬೇಕು.

ಜೊತೆಗೆ ಸಮಾಜವನ್ನು ಎಚ್ಚರಿಸುವ ಕೆಲಸ ಮಾಡುವುದು ಅತ್ಯಂತ ಮುಖ್ಯ ಕರ್ತವ್ಯವಾಗಬೇಕು ಎಂದು ಹೇಳಿದರು.

ಪತ್ರಿಕೋದ್ಯಮ ಕ್ಷೇತ್ರದವರು ಸತ್ಯವನ್ನು ತಿಳಿಸುತ್ತಾರೆ ಎಂಬ ಕಾರಣಕ್ಕೆ ಮಾಧ್ಯಮಗಳ ಮಾಲೀಕರು ಅಥವಾ ಪತ್ರಕರ್ತರ ಕಡೆ ಜನ ನೋಡುವುದಲ್ಲದೆ, ನಿಮ್ಮ ಬರವಣಿಗೆ, ನೀವು ಹೇಳಿದ ಮಾತಿನ ಮೇಲೆ ನಾವು ಸಂಸತ್‌ನಲ್ಲಿ ಚರ್ಚೆಗಳನ್ನು ಮಾಡುತ್ತೇವೆ ಎಂದರು. ಮುಂದಿನ ಪೀಳಿಗೆ ಉತ್ತಮ ಜೀವನ ನಡೆಸಬೇಕಾದರೆ ಮಾಧ್ಯಮಗಳ ಪಾತ್ರ ಮುಖ್ಯವಾಗಿದೆ. ಹಾಗಾಗಿ ಮಾಧ್ಯಮಗಳು ಕೈ ಕಟ್ಟಿ ಕುಳಿತದಲ್ಲಿ ಅದು ಸಾಧ್ಯವಾಗುವುದಿಲ್ಲ. ಹೀಗಾಗಿ ಪ್ರಜಾಪ್ರಭುತ್ವ ಉಳಿಯಬೇಕಾದಲ್ಲಿ ಮಾಧ್ಯಮಗಳು ಪಾತ್ರ ಅತ್ಯಂತ ಮುಖ್ಯವಾಗಿದೆ. ಜೊತೆಗೆ, ಅನ್ಯಾಯಕ್ಕೊಳಗಾದವರ ಪರವಾಗಿ ಮಾಧ್ಯಮಗಳು ನಿಲ್ಲಬೇಕು. ಅವಕಾಶ ಸಿಕ್ಕಲ್ಲಿ ಆ ಕೆಲಸ ಮಾಡಿ ಎಂದು ಅವರು ಸಲಹೆ ನಿಡಿದರು.


Spread the love

By admin