Spread the love

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಿಂದ ಮಹಾದಾಯಿ ಜಲ -ಜನ ಆಂದೋಲನ ನಡೆಸಲಾಗುತ್ತಿದೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಕಾಂಗ್ರೆಸ್ ನಿಂದ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಸಮಾವೇಶಕ್ಕೆ ಆಗಮಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

 

ಬಸ್ ಹರಿದು ಕಾಂಗ್ರೆಸ್ ಕಾರ್ಯಕರ್ತ ನಿಂಗಪ್ಪ ಮನ್ನಾಪುರ ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಕೊಪ್ಪಿಕರ್ ರಸ್ತೆಯ ಸಮೀಪ ಸಾರಿಗೆ ಬಸ್ ಹರಿದು ಅವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ನಂತರ ಸಾರಿಗೆ ಸಂಸ್ಥೆ ಬಸ್ ಅಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾರೆ.


Spread the love

By admin