Spread the love

ಬೆಂಗಳೂರು: ತಲೆಗೆ‌ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿವಿರುದ್ಧ ಎಫ್​​ಐಆರ್ ದಾಖಲಾಗಿದೆ. ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ವಿರುದ್ಧ ಕೂಡ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 306ರಡಿ (ಆತ್ಮಹತ್ಯೆಗೆ ಪ್ರಚೋದನೆ) ಎಫ್​ಐಆರ್ ದಾಖಲಾಗಿದೆ.

ಉದ್ಯಮಿ ಪ್ರದೀಪ್ ಪತ್ನಿ ನೀಡಿದ ದೂರಿನನ್ವಯ ಪೊಲೀಸರು ಎಫ್​ಐಆರ್​​ ದಾಖಲಿಸಿದ್ದಾರೆ. ಡೆತ್‌ನೋಟ್‌ನಲ್ಲಿ ಅರವಿಂದ ಲಿಂಬಾವಳಿ, ಜಿ.ರಮೇಶ್‌ ರೆಡ್ಡಿ, ಕೆ.ಗೋಪಿ‌, ಜಯರಾಮ್ ರೆಡ್ಡಿ, ರಾಘವ ಭಟ್, ಸೋಮಯ್ಯ ಹೆಸರು ಉಲ್ಲೇಖವಾಗಿದ್ದು, ಎಲ್ಲರೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವ ಸಾಧ್ಯತೆ ಇದೆ.

ಹಣಕಾಸಿನ ವಿಚಾರದಲ್ಲಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸರು ಪ್ರದೀಪ್ ಅವರ ಬ್ಯಾಂಕ್ ಸ್ಟೇಟ್ ಮೆಂಟ್ ಪರಿಶೀಲನೆ ನಡೆಸುತ್ತಿದ್ದಾರೆ. ರೆಸಾರ್ಟ್​​ನಲ್ಲಿ ಹೂಡಿಕೆ ಮಾಡಲು ಹಣ ಕೊಟ್ಟಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಮೊದಲಿಗೆ ಇಂದು ಐವರು ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ ಮಾಡುವ ಸಧ್ಯತೆ ಇದೆ. ಮಧ್ಯಾಹ್ನದ ವೇಳೆಗೆ ನೋಟಿಸ್ ಕೊಟ್ಟು ಕರೆಯಲು ಕಗ್ಗಲಿಪುರ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ಆ ಬಳಿಕ ಅರವಿಂದ್ ಲಿಂಬಾವಳಿಗೆ ನೋಟಿಸ್ ಕೊಟ್ಟು ವಿಚಾರಣೆಗೆ ಕರೆಯಲು ತಯಾರಿ ನಡೆಸುತ್ತಿದ್ದಾರೆ.


Spread the love

By admin