Spread the love

ವಿಜಯಪುರ: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀ ಅಸ್ತಂಗತರಾಗಿದ್ದು, ಜ್ಞಾನಯೋಗಾಶ್ರಮದಿಂದ ಪಾರ್ಥಿವ ಶರೀರದ ಮೆರವಣಿಗೆ ಆರಂಭವಾಗಿದೆ.ವಿಜಯಪುರ ಸೈನಿಕ ಶಾಲೆಯತ್ತ ಪಾರ್ಥಿವ ಶರೀರ ಮೆರವಣಿಗೆ ಸಾಗಿದ್ದು, ಅಪಾರ ಸಂಖ್ಯೆಯ ಭಕ್ತರು ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಅಲಂಕೃತ ವಾಹನದಲ್ಲಿ ಶ್ರೀಗಳ ಪಾರ್ಥಿವ ಶರೀರದ ಮೆರವಣಿಗೆ ಸಾಗಿದೆ. ವಿಜಯಪುರ ಸೈನಿಕ ಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ತತ್ವಶಾಸ್ತ್ರದಲ್ಲಿ ಎಂಎ ಪದವೀಧರರಾದ ಅವರು ಕನ್ನಡ, ಸಂಸ್ಕೃತ, ಇಂಗ್ಲೀಷ್, ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಪರಿಣಿತರಾಗಿದ್ದರು. ಆಧ್ಯಾತ್ಮದ ಬಗ್ಗೆ ಆಳವಾದ ಅಧ್ಯಯನ ನಡೆಸಿದ್ದರು. ಇಂದು ಸಂಜೆ ಆಶ್ರಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ವಿಜಯಪುರ ಸೈನಿಕ ಶಾಲೆ ಆವರಣದಲ್ಲಿ ಸಾರ್ವಜನಿಕರು, ಭಕ್ತರು, ಗಣ್ಯರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.


Spread the love

By admin