Spread the love

ದೊಡ್ಮನೆ ಕುಡಿ ವಿನಯ್ ರಾಜ್ ಕುಮಾರ್ ನಟನೆಯ ಬಹು ನಿರೀಕ್ಷಿತ ಚಿತ್ರ ‘ಪೆಪೆ’. ಟೈಟಲ್ ಮೂಲಕವೇ ಕುತೂಹಲ ಹುಟ್ಟು ಹಾಕಿರುವ ಈ ಚಿತ್ರದ ರಗಡ್ ಟೀಸರ್ ಝಲಕ್ ಸಿನಿ ರಸಿಕರಲ್ಲಿ ಮತ್ತಷ್ಟು ಕುತೂಹಲವನ್ನು ಹುಟ್ಟು ಹಾಕಿದೆ.

ಸದ್ಯ ಚಿತ್ರತಂಡ ಹೊಸ ವರ್ಷಕ್ಕೆ ಮಾಸ್ ಫೀಲ್ ಇರೋ ರಗಡ್ ಪೋಸ್ಟರ್ ಬಿಡುಗಡೆ ಮಾಡಿದೆ.

ವಿನಯ್ ರಾಜ್ ಕುಮಾರ್ ಹೊಸ ಅವತಾರ, ಮಾಸ್ ಲುಕ್ ಚಿತ್ರ ಪ್ರೇಮಿಗಳ ಗಮನ ಸೆಳೆಯುತ್ತಿದೆ.

ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಪೆಪೆ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಕೊಂಡಿದೆ. ಟೈಟಲ್ ಮೂಲಕವೇ ಕುತೂಹಲವನ್ನು ಹುಟ್ಟುಹಾಕಿರುವ ಈ ಚಿತ್ರವನ್ನು ಶ್ರೀಲೇಶ್ ಎಸ್ ನಾಯರ್ ನಿರ್ದೇಶನ ಮಾಡುತ್ತಿದ್ದಾರೆ.

ಪೆಪೆ ಗ್ಯಾಂಗ್ ಸ್ಟಾರ್ ಸಿನಿಮಾ ಇದಾಗಿದ್ದು, ವಿನಯ್ ರಾಜ್ ಕುಮಾರ್ ಹಿಂದಿನ ಎಲ್ಲಾ ಸಿನಿಮಾಗಳಿಗಿಂತ ಡಿಫ್ರೆಂಟ್ ಅವತಾರ ತಾಳಿದ್ದಾರೆ. ಒಂದೇ ಜಾನರ್ ಸಿನಿಮಾಗೆ ಒಗ್ಗಿ ಕೊಳ್ಳದೇ, ಪ್ರತಿ ಬಾರಿ ವಿಭಿನ್ನ ಸಬ್ಜೆಕ್ಟ್ ಆಯ್ಕೆ ಮಾಡಿಕೊಳ್ಳುವ ವಿನಯ್ ರಾಜ್ ಕುಮಾರ್ ಈ ಚಿತ್ರದಲ್ಲಿ ಕಂಪ್ಲೀಟ್ ಡಿಫ್ರೆಂಟ್ ಅವತಾರ ತಾಳಿದ್ದಾರೆ. ಗ್ಯಾಂಗ್ ಲೀಡರ್ ಆಗಿ ತೆರೆ ಮೇಲೆ ಮಿಂಚಲು ರೆಡಿಯಾಗಿದ್ದು, ಟೀಸರ್ ಹಾಗೂ ಬಿಡುಗಡೆಯಾಗಿರುವ ಹೊಸ ಪೋಸ್ಟರ್ ಇದಕ್ಕೆ ಸಾಕ್ಷಿಯಾಗಿವೆ.

ಚಿತ್ರದಲ್ಲಿ ನಾಯಕಿಯಾಗಿ ಕಾಜಲ್ ಕುಂದರ್ ನಟಿಸಿದ್ದು, ಯಶ್ ಶೆಟ್ಟಿ, ಬಾಲ ರಾಜ್ ವಾಡಿ, ಮೆದಿನಿ ಕೆಳಮನಿ, ಅರುಣಾ ಬಾಲರಾಜ್, ನವೀನ್ ಡಿ ಪಡಿಲ್ ಸೇರಿದಂತೆ ಸಾಕಷ್ಟು ಮಂದಿ ಬಣ್ಣ ಹಚ್ಚಿದ್ದಾರೆ.


Spread the love

By admin