ಕೋಲಾರ: ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಎಂದು ಅವರು ಘೋಷಣೆ ಮಾಡಲಿ ಮಾಡದೆ ಇರಲಿ, ಅವರು ಬರಲಿ ಬರದೆ ಇರಲಿ, ಅದು ನಮಗೆ ಬೇಡವಾದ ವಿಷಯ. ಆದರೆ ನಾವು ಕೋಲಾರ ವನ್ನ ಗೆದ್ದೇ ಗೆಲ್ಲುತ್ತೇವೆ, ಅದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಹೇಳಿದ್ರು. ಕೋಲಾರದ ಕೆಇಬಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಿಜೆಪಿಯ ಬೂತ್ ವಿಜಯ ಅಭಿಯಾನ ಕುರಿತಾದ ಪೂರ್ವಭಾವಿ ಸಭೆಯಲ್ಲಿ,
ಭಾಗವಹಿಸಿದ ವೇಳೆ ಸುದ್ದಿಗಾರರೊಂದಿಗೆ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ವಿಚಾರ ಸಂಬಂಧ ಮಾತನಾಡಿದ ಅವರು, ರಾಜಕೀಯ ಎನ್ನುವುದು ಯಾರೂ ಊಹೆ ಮಾಡಲಾಗುವುದಿಲ್ಲ, ನಮ್ಮಲ್ಲಿ ಈಗಾಗಲೇ ಪ್ರಬಲ ಅಭ್ಯರ್ಥಿ ಇದ್ದಾರೆ, ಯಾರೋ ಒಬ್ಬರು ಗಣ್ಯ ವ್ಯಕ್ತಿ, ಮುಖ್ಯಮಂತ್ರಿಗಳಾಗಿದ್ದವರು ಬಂದು ಗೆಲ್ತಾರೆ ಎನ್ನುವುದು ಭ್ರಮೆ ಎಂದು ಟಾಂಗ್ ನೀಡಿದ್ರು. ಅಲ್ಲದೆ ಅವತ್ತಿಗೆ ಸಿದ್ದುನ್ಯಾಮಗೌಡರು ಸಣ್ಣವರಾಗಿದ್ದು, ಹೆಗಡೆ ಅವರನ್ನ ಸೋಲಿಸಿದ್ರು, ಹಾಗಾಗಿ ನಾನೇ ಗೆದ್ದು ಬಿಡುವೆ ಎಂದುಕೊಳ್ಳುವುದು ಭ್ರಮೆ ಎಂದು ಹೇಳಿದ್ರು.