Spread the love

ಬೆಂಗಳೂರು: ಬೈಕ್ ಗೆ ಟೆಂಪೋ ಟ್ರಾವೆಲ್ಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೆಂಗೇರಿ ಟೌನ್ ಬಳಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಕೆಎ 41 ಇಡಬ್ಲ್ಯು 6075 ನಂಬರ್ ನ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇನ್ನೂ ವಿಷಯ ತಿಳಿದ ಕೂಡಲೇ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇನ್ನೂ ಈ ವೇಳೆ ಟಿಟಿ ಚಾಲಕ ಆನಂದನನ್ನ ಪೊಲೀಸರು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಇನ್ನೂ ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love

By admin