Spread the love

ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಕೆ ಎಲ್ ರಾಹುಲ್‌ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಇದೇ ಜನವರಿ 22 ಹಾಗೂ 23ರಂದು ಪುಣೆಯಲ್ಲಿ ತಮ್ಮ ಬಹುಕಾಲದ ಗೆಳತಿ ಆತಿಯಾ ಶೆಟ್ಟಿ ಜತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಹೀಗಾಗಿ ವೈವಾಹಿಕ ಜೀವನಕ್ಕೆ ಕಾಲಿಡುವ ಮುನ್ನ ಕನ್ನಡಿಗ ಕೆ ಎಲ್ ರಾಹುಲ್, ನಾಡದೇವತೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದಿದ್ದಾರೆ.

 

ಹೌದು, ಸಾಂಸ್ಕೃತಿಕ ನಗರಿ ಮೈಸೂರಿಗೆ ತೆರಳಿದ ಕೆ ಎಲ್ ರಾಹುಲ್‌, ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ರಣಜಿ ಪಂದ್ಯಗಳನ್ನಾಡುವ ಸಂದರ್ಭದಲ್ಲಿ ಚಾಮುಂಡೇಶ್ವರಿ ತಾಯಿಯ ದೇಗುಲಕ್ಕೆ ಭೇಟಿ ನೀಡಿದ್ದರು. ಇದಾಗಿ ಐದಾರು ವರ್ಷಗಳ ಬಳಿಕ ಕೆ ಎಲ್ ರಾಹುಲ್ ಮೊದಲ ಬಾರಿಗೆ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದಾರೆ. ತಾಯಿ ಚಾಂಮುಂಡೇಶ್ವರಿ ಸನ್ನಿದಿಯಲ್ಲಿ ಕೆ ಎಲ್ ರಾಹುಲ್ 15 ನಿಮಿಷಗಳ ಕಾಲ ಪ್ರಾರ್ಥನೆ ಸಲ್ಲಿಸಿದರು.


Spread the love

By admin