Spread the love

ಬೆಂಗಳೂರು: ಮದ್ಯ ಮಾರಾಟಕ್ಕೆ ಮಾತ್ರ ಪರವಾನಿಗೆ ಪಡೆದು ಮದ್ಯ ಸೇವನೆಗೂ ಅವಕಾಶ ನೀಡುವುದು ಮತ್ತು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡಿದ ಆರೋಪ ಹೊತ್ತವರ ಮೇಲೆ ವಾರೆಂಟ್ ಇಲ್ಲದೇ ದಾಳಿ ನಡೆಸುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಬೆಂಗಳೂರಿನ ಹೈಕೋರ್ಟ್ ಪೀಠ ತಿಳಿಸಿದೆ.

ಸಿಎಲ್-2 ಪರವಾನಗಿ ಹೊಂದಿದ್ದ ಎಂ.ಸುದರ್ಶನ ಗೌಡ ಎಂಬುವರು ಮದ್ಯ ಮಾರಾಟ ಮಳಿಗೆಯ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದ ಕೊಪ್ಪಳ ವಲಯ ಅಬಕಾರಿ ನಿರೀಕ್ಷಕರ ಕ್ರಮ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಹೇಮಂತ್ ಚಂದನಗೌಡರ್ ಅವರಿದ್ದ ನ್ಯಾಯಪೀಠ,

ಪೊಲೀಸರು ವಾರೆಂಟ್ ಇಲ್ಲದೇ ದಾಳಿ ನಡೆಸುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ತಿಳಿಸಿ ಪ್ರಕರಣವನ್ನು ರದ್ದುಪಡಿಸಿದರು. ಪರವಾನಿಗೆದಾರರು ನಿಯಮಗಳನ್ನು ಉಲ್ಲಂಘಿಸಿರುವ ಪ್ರಕರಣದಲ್ಲಿ ಅಬಕಾರಿ ನಿರೀಕ್ಷಕರು ವಾರೆಂಟ್ ಪಡೆದು ಅಥವಾ ಶೋಧ ನಡೆಸಲು ಸಕಾರಣಗಳನ್ನು ನಮೂದಿಸಿದ ಬಳಿಕ ಮದ್ಯದಂಗಡಿ ಮೇಲೆ ದಾಳಿ ನಡೆಸಿ ಶೋಧ ಮಾಡಬಹುದು. ಅಲ್ಲಿ ಅಕ್ರಮ ನಡೆಯುತ್ತಿದ್ದರೆ ಜಪ್ತಿ ಕಾರ್ಯ ಮಾಡಬಹುದು. ಆದರೆ, ವಾರೆಂಟ್ ಇಲ್ಲದೆ ದಾಳಿ ನಡೆಸುವಂತಿಲ್ಲ ಎಂದು ಕೋರ್ಟ್ ತಿಳಿಸಿತು..


Spread the love

By admin