ಬೆಂಗಳೂರು: ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಅಂಗನವಾಡಿ ನೇಮಕಾತಿಗೆ ಮಾನದಂಡ ಬದಲಿಸುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಪಿಯುಸಿ ಮತ್ತು ಸಹಾಯಕರ ಹುದ್ದೆಗಳಿಗೆ ಎಸ್‌ಎಸ್‌ಎಲ್ಸಿ ಕಡ್ಡಾಯಗೊಳಿಸಲಾಗುವುದು. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಸಿಬ್ಬಂದಿಗಳಿಗೆ ಬಡ್ತಿಗೆ ನಿಯಮ ಬದಲಾವಣೆ ಮಾಡಲಾಗುವುದು.
ಹೊಸ ಕಾರ್ಯಕರ್ತೆಯರ ಆಯ್ಕೆ ಮಾಡುವ ಸಂದರ್ಭದಲ್ಲಿ ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಕೋರ್ಸ್ ಪೂರ್ಣಗೊಳಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹಿಂದೆ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಎಸ್‌ಎಸ್‌ಎಲ್ಸಿ ಮತ್ತು ಸಹಾಯಕಿಯರ ಹುದ್ದೆಗಳಿಗೆ ಏಳನೇ ತರಗತಿ ಮಾನದಂಡ ಇತ್ತು. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿರುವದರಿಂದ ಹೆಚ್ಚಿನ ಶೈಕ್ಷಣಿಕ ಅರ್ಹತೆ ನಿಗದಿಪಡಿಸಲಾಗಿದ್ದು, ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದ ಕೋರ್ಸ್ ಗಳನ್ನು ಪೂರ್ಣಗೊಳಿಸಿದವರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಲಾಗಿದೆ.