Spread the love

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ 6 ಜನ ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಚುಂಚನೂರ ಗ್ರಾಮದ ಬಳಿ ಕರ್ವ್ ಇರುವ ಕಾರಣ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಆಲದ ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿದೆ.

ಈ ಪರಿಣಾಮ 6 ಜನ ಸಾವನ್ನಪ್ಪಿದ್ದಾರೆ. ಹನುಮವ್ವ(25), ದೀಪಾ(31), ಸವಿತಾ(17), ಸುಪ್ರಿತಾ(11), ಮಾರುತಿ(42),

ಇಂದಿರವ್ವಾ(24) ಮೃತ ದುರ್ದೈವಿಗಳು. ಹುಲಕುಂದ ಗ್ರಾಮದಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಘಟನೆ ನಡೆದಿದೆ. ಅಪಘಾತಕ್ಕೀಡಾದ ಪಿಕ್ ಅಪ್ ಬೊಲೆರೊ ವಾಹನದಲ್ಲಿ 23 ಜನ ಪ್ರಯಾಣಿಸುತ್ತಿದ್ದರು. ಈ ಪೈಕಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಒಬ್ಬರು ಮೃತಪಟ್ಟಿದ್ದಾರೆ. ಸದ್ಯ ಸ್ಥಳಕ್ಕೆ ಎಸ್‌ಪಿ ಡಾ.ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

By admin