Spread the love

ಹುಬ್ಬಳ್ಳಿ: ಕಾಂಗ್ರೆಸ್‌ಗೆ ಮಹದಾಯಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ.‌ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಚುನಾವಣೆಗಾಗಿ ಈ ಹೋರಾಟ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅಧಿವೇಶನದಲ್ಲಿ ಮಹದಾಯಿ ಬಗ್ಗೆ ಒಂದು ಶಬ್ದವನ್ನೂ ಮಾತಾಡಿಲ್ಲ. ಎಲ್ಲಿ ಮಾತಾಡಬೇಕು ಅಲ್ಲಿ ಮಾತಾಡೋದು ಬಿಟ್ಟು, ಇಲ್ಲಿ ಬಂದು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಅಧಿನಾಯಕಿ ಸೋನಿಯಾ ಗಾಂಧಿ ಕರ್ನಾಟಕಕ್ಕೆ ಒಂದು ಹನಿ ನೀರು ಕೊಡಲ್ಲಾ ಅಂದಿದ್ರು. ಸೋನಿಯಾ ಗಾಂಧಿ ಮಾತು ಮೀರಿ ಹೋರಾಡ್ತೀರಾ‌..? ಇವರು ಕರ್ನಾಟಕದ ಹಿತಾಸಕ್ತಿಯ ಬಗ್ಗೆ ಒಮ್ಮೆಯೂ ಹೋರಾಡಿಲ್ಲ. ಮಹದಾಯಿ ಹೋರಾಟಗಾರರು, ರೈತರ ಮೇಲೆ ಲಾಠಿಚಾರ್ಜ್‌ ಮಾಡಿಸಿದ್ದರು. ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲಾ ನೀರಾವರಿ ಯೋಜನೆ ಜಾರಿ ಮಾಡ್ತೀವಿ ಅಂದಿದ್ದಾರೆ ಸಿದ್ದರಾಮಯ್ಯ. ಯಾವನರಿ ಇವಾ..? ಎಂದು ಸಿದ್ದರಾಮಯ್ಯ ವಿರುದ್ಧ ಶೆಟ್ಟರ್ ಟೀಕಿಸಿದರು.


Spread the love

By admin