Spread the love

ಲಬುರಗಿ: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಕಲಬುರ್ಗಿ ಯುನಾನಿ ಆಸ್ಪತ್ರೆಯ ಆವರಣದಲ್ಲಿ ನಡೆದಿದೆ. ಆರೋಪಿ ಮಂಜುನಾಥ ಸ್ವಾಮಿ ಮೇಲೆ ಪೊಲೀಸರು ಫೈರಿಂಗ್ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಶಾಂತ್ ಮೇಲೆ ಹಾಡಹಗಲೇ ಕಲ್ಲು ಎತ್ತಿ ಹಾಕಿ ಮಂಜುನಾಥ ಸ್ವಾಮಿ ಕೊಲೆ ಮಾಡಿದ್ದ.

ಆರೋಪಿಯನ್ನು ಪೊಲೀಸರು ಬಂಧಿಸಲು ತೆರಳಿದ್ದ ವೇಳೆಯಲ್ಲಿ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಮುಂದಾಗಿದ್ದಾನೆ. ಆತ್ಮರಕ್ಷಣೆಗಾಗಿ ಆರೋಪಿ ಮಂಜುನಾಥ ಸ್ವಾಮಿ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಮಂಜುನಾಥ ಸ್ವಾಮಿಯ ಬಲಗಾಲಿಗೆ ಚೌಕ್ ಠಾಣೆ ಸಿಪಿಐ ರಾಜಶೇಖರ ಹಳಗೋದಿ ಫೈರಿಂಗ್ ಮಾಡಿದ್ದಾರೆ.

ಗಾಯಾಳು ಮಂಜುನಾಥ ಸ್ವಾಮಿ ವಶಕ್ಕೆ ಪಡೆದು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗಾಯಗೊಂಡ ಕಾನ್ಸ್ ಟೇಬಲ್ ಸಿದ್ದರಾಮಸ್ವಾಮಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಶಾಂತ್ ಕುಂಬಾರ(30) ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಂಜುನಾಥ ಸ್ವಾಮಿ ಕೊಲೆ ಮಾಡಿದ್ದ. ಕಲಬುರ್ಗಿಯ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


Spread the love

By admin