Spread the love

ಯ್ಯಪ್ಪ ಸ್ವಾಮಿ ದೇಗುಲ ನಿರ್ಮಾಣಕ್ಕೆ ನಿವೇಶನ ನೀಡಿ ಅಲ್ಲಿ ಕಟ್ಟಡ ನಿರ್ಮಿಸಿ ಕೊಡುವಂತೆ ಶಿವಮೊಗ್ಗ ಜಿಲ್ಲೆ ಸೊರಬದ ಅಯ್ಯಪ್ಪ ಸ್ವಾಮಿ ಭಕ್ತರು ಪುರಸಭೆ ಅಧ್ಯಕ್ಷ ಈರೇಶ್ ಮೇಸ್ತ್ರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕಳೆದ 20 ವರ್ಷಗಳಿಂದ ಸೊರಬ ಪಟ್ಟಣದಲ್ಲಿ ಅಯ್ಯಪ್ಪ ಸ್ವಾಮಿ ಭಕ್ತರು ಕಾರ್ತಿಕ ಮಾಸದಲ್ಲಿ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಮಾಡಿಕೊಂಡು ಬಂದಿದ್ದು, ಆದರೆ ವ್ರತವನ್ನು ಅನುಸರಿಸಲು ರಸ್ತೆ ಬದಿಯ ಖಾಲಿ ಜಾಗ ಅಥವಾ ದೇವಸ್ಥಾನದ ಜಾಗವನ್ನು ಆಶ್ರಯಿಸಬೇಕಾಗಿದೆ ಎಂದು ಹೇಳಿದ್ದಾರೆ.

 

ಹೀಗಾಗಿ ಪಟ್ಟಣದಲ್ಲಿ ಅಯ್ಯಪ್ಪ ಸ್ವಾಮಿ ದೇಗುಲ ನಿರ್ಮಿಸಿದರೆ ಭಕ್ತರಿಗೆ ವ್ರತಾಚರಣೆ ಮಾಡಲು ಅನುಕೂಲವಾಗುತ್ತದೆ. ಹೀಗಾಗಿ ಸೂಕ್ತ ನಿವೇಶನ ಒಂದನ್ನು ಗುರುತಿಸಿ ಅಲ್ಲಿ ದೇಗುಲ ಕಟ್ಟಡ ನಿರ್ಮಿಸಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ.


Spread the love