Spread the love

ವದೆಹಲಿ: ದೆಹಲಿ, ಎನ್.ಸಿ.ಆರ್. ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಭೂಕಂಪ ಸಂಭವಿಸಿದೆ.ಪಾಕಿಸ್ತಾನ, ಆಫ್ಘಾನಿಸ್ತಾನ ಗಡಿಯಲ್ಲಿಯೂ ಭೂಕಂಪ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 5.9ರಷ್ಟು ತೀವ್ರತೆ ದಾಖಲಾಗಿದೆ. ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ-ಎನ್‌ಸಿಆರ್‌ನಲ್ಲಿ ಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆಯ ಭೂಕಂಪನವು ಇಂದು ಸಂಜೆ 7:55 ಕ್ಕೆ ಅಫ್ಘಾನಿಸ್ತಾನದ ಫೈಜಾಬಾದ್‌ನ ದಕ್ಷಿಣಕ್ಕೆ 79 ಕಿಮೀ ದೂರದಲ್ಲಿ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.


Spread the love

By admin