Spread the love

ಸಾರವರ್ಧಿತ ಅಕ್ಕಿ ಉಪಯೋಗಿಸಿ ಆರೋಗ್ಯವಂತರಾಗಿ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ ಅವರು ತಿಳಿಸಿದ್ದಾರೆ.

ದಿನನಿತ್ಯದ ಆಹಾರದಲ್ಲಿ ಸಂಪೂರ್ಣ ಪೋಷಕಾಂಶಗಳು ಲಭ್ಯವಾಗದೇ ಇರುವ ಕಾರಣದಿಂದಾಗಿ ಅನೀಮಿಯ, ಇರುಳು ಕುರುಡುತನದಂತಹ ರೋಗಗಳು ಬರಬಹುದಾಗಿದೆ.

ಅಲ್ಲದೇ, ಹೆಚ್ಚಾಗಿ ಮಹಿಳೆಯರು ಹಾಗೂ ಮಕ್ಕಳ ಅಪೌಷ್ಪಿಕತೆಗೆ ಬಲಿಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇದನ್ನು ತಪ್ಪಿಸಲು ಹೆಚ್ಚಿನ ಪೋಷಕಾಂಶದ ಅಗತ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಜನಸಾಮಾನ್ಯರಲ್ಲಿನ ಅಪೌಷ್ಟಿಕತೆ ಹೋಗಲಾಡಿಸಿ ಆರೋಗ್ಯ ವೃದ್ಧಿಸುವ ಉದ್ದೇಶದಿಂದ ಸಾರ್ವಜನಿಕ ವಿತರಣಾ ಪದ್ಧತಿಯ ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡಲಾಗುವ ಪ್ರತಿ 50 ಕೆ.ಜಿಯ ಅಕ್ಕಿಯ ಚೀಲದಲ್ಲಿ ಅರ್ಧ ಕೆಜಿಯಷ್ಟು ಪೋಷಕಾಂಶ (ವಿಟಮಿನ್ ಎ ಮತ್ತು ಡಿ. ಐರನ್, ಫೋಲಿಕ್ ಆಸಿಡ್, ಬಿ ಕಾಂಪ್ಲೇಕ್ಸ್, ಜಿಂಕ್ ಹಾಗೂ ಅಯೋಡಿನ್) ಭರಿತ ಸಾರವರ್ಧಿತ ಅಕ್ಕಿ ಬೆರೆಸಿ 2022 ನೇ ಮೇ ತಿಂಗಳಿನಿಂದ ನ್ಯಾಯಬೆಲೆ ಅಂಗಡಿಯಲ್ಲಿ ವಿತರಣೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸಾರವರ್ಧಿತಗೊಳಿಸಿರುವ(ಫೋರ್ಟಿಫೈಡ್) ಅಕ್ಕಿಯಲ್ಲಿ ಕೆಲವೊಂದು ಅಕ್ಕಿಯ ಕಾಳುಗಳು ಹೊಳಪಿನಿಂದ ನೋಡಲು ಪ್ಲಾಸ್ಟಿಕ್ ರೀತಿಯಲ್ಲಿ ಕಾಣಿಸುತ್ತಿದ್ದು, ಸಾರ್ವಜನಿಕರು ಆತಂಕಕ್ಕೊಳಗಾಗದೇ ವಿತರಣೆ ಮಾಡಲಾಗುತ್ತಿರುವ ಸಾರವರ್ಧಿತ ಅಕ್ಕಿಯನ್ನು ಉಪಯೋಗಿಸಿ ಆರೋಗ್ಯವಂತರಾಗಲು ಅವರು ಕೋರಿದ್ದಾರೆ.


Spread the love

By admin