Spread the love

ಳೆದ 13 ವರ್ಷಗಳಿಂದ ನವದೆಹಲಿಯಲ್ಲಿ ನಡೆಯುತ್ತಿದ್ದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನ ನಡೆದುಕೊಂಡು ಬಂದಿದ್ದು, ಆದರೆ ಇದೇ ಮೊದಲ ಬಾರಿಗೆ ಈ ವರ್ಷದ ಪರೇಡ್ ನಲ್ಲಿ ಭಾಗವಹಿಸುವ ಅವಕಾಶದಿಂದ ವಂಚಿತವಾಗುವಂತಾಗಿದೆ.

ಅವಕಾಶ ವಂಚಿತ ಇತರೆ ರಾಜ್ಯಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕೇಂದ್ರ ರಕ್ಷಣಾ ಇಲಾಖೆ ಅಡಿ ಕಾರ್ಯ ನಿರ್ವಹಿಸುವ ಸ್ತಬ್ಧ ಚಿತ್ರ ಆಯ್ಕೆ ಸಮಿತಿ ಈ ತೀರ್ಮಾನವನ್ನು ಕೈಗೊಂಡಿದ್ದು, ಹೀಗಾಗಿ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ನಾರಿ ಶಕ್ತಿ ಸ್ತಬ್ಧ ಚಿತ್ರ ಪ್ರದರ್ಶನ ಮಾಡಬೇಕೆಂಬ ಕರ್ನಾಟಕದ ಯೋಜನೆಗೆ ಹಿನ್ನಡೆಯಾಗಿದೆ.

 

ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಆಂಧ್ರ ಪ್ರದೇಶ, ಕೇರಳ, ತಮಿಳುನಾಡು, ಅರುಣಾಚಲ ಪ್ರದೇಶ, ಅಸ್ಸಾಂ, ಚಂಡೀಗಢ, ಡಿಯೋ ದಾಮನ್, ಗುಜರಾತ್, ಜಮ್ಮು ಕಾಶ್ಮೀರ, ಜಾರ್ಖಂಡ್, ಮಧ್ಯಪ್ರದೇಶ, ತ್ರಿಪುರ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳು ಆಯ್ಕೆಯಾಗಿವೆ.


Spread the love

By admin