Spread the love

ಶಿವಮೊಗ್ಗ: ಸ್ಟೆಬಿಲೈಜರ್ ಸ್ಪೋಟವಾಗಿ ತಂದೆ ಸಾವು ಕಂಡು, ಮಗ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಕುವೆಂಪು ರಸ್ತೆಯ ಜಿಲ್ಲಾ ಪಂಚಾಯಿತಿ ಕಚೇರಿ ಎದುರಿನ ಮನೆಯಲ್ಲಿ ಘಟನೆ ನಡೆದಿದೆ. ಪ್ರತಿಷ್ಠಿತ ಭೂಪಾಳಂ ಕುಟುಂಬದ ಎಸ್.

ಶರತ್(39) ಮೃತಪಟ್ಟವರು ಎಂದು ಹೇಳಲಾಗಿದೆ. ಶರತ್ ಅವರ ಪುತ್ರ ಸಂಚಿತ್(12) ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Spread the love

By admin