Spread the love

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹೊಸಕೆರೆ ಡಾಬಾ ಬಳಿ ಕನ್ನಡ ಸಂಘಟನೆಯ ತಾಲೂಕು ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಗೌರಿಪುರದ ರಾಮಕೃಷ್ಣ(39) ಮೃತಪಟ್ಟ ಕನ್ನಡ ಪರ ಹೋರಾಟಗಾರ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜುನ್ ಮತ್ತು ಪ್ರಶಾಂತ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಜಗಳೂರು ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ತಾಲೂಕು ಅಧ್ಯಕ್ಷನಾಗಿದ್ದ ರಾಮಕೃಷ್ಣ ಇತ್ತೀಚೆಗೆ ಗ್ರಾಮ ಪಂಚಾಯಿತಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿರುವುದು ಬಗ್ಗೆ ದೂರು ನೀಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೊಲೆ ನಡೆಯದಿರಬಹುದು ಎಂದು ಹೇಳಲಾಗಿದೆ.

ಘಟನೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಸಿ.ಬಿ. ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾರ್ಟಿ ಮಾಡಲು ಹೊಸಕೆರೆ ಡಾಬಾಕ್ಕೆ ರಾಮಕೃಷ್ಣನನ್ನು ಕರೆಸಿಕೊಂಡಿದ್ದ ಆರೋಪಿಗಳು ಪಾರ್ಟಿಯ ನಡುವೆ ಜಗಳವಾಡಿ ಕಬ್ಬಿಣದ ರಾಡ್ ಮತ್ತು ಕಲ್ಲುಗಳಿಂದ ಹೊಡೆದು ಕೊಲೆ ಮಾಡಿದ್ದಾರೆ.


Spread the love

By admin