Spread the love

ಡಿಕೇರಿ: ಕೊಡಗಿನಲ್ಲಿ ಹೃದಯಾಘಾತದಿಂದ 12 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. 6ನೇ ತರಗತಿ ವಿದ್ಯಾರ್ಥಿ ಕೀರ್ತನ್ ಹೃದಯಾಘಾತದಿಂದ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ.

ಕೂಡುಮಂಗಳೂರು ಗ್ರಾಮದ ಮಂಜಾಚಾರಿ ಅವರ ಪುತ್ರ ಕೀರ್ತನ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದ ಕೀರ್ತನ್ ಕೊಪ್ಪ ಭಾರತಮಾತಾ ಶಾಲೆಯ 6ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಶನಿವಾರ ರಾತ್ರಿಯಿಂದ ಕೀರ್ತನ್ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Spread the love

By admin