Spread the love

ಹಾವೇರಿ: ಸಾಹಿತ್ಯ ಲೋಕಕ್ಕೆ ಹಾವೇರಿ ತನ್ನದೇ ಆದ ಕೊಡುಗೆ ನೀಡಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಇವತ್ತು ಜಾತಿ, ಧರ್ಮ, ಭ್ರಷ್ಟಾಚಾರದಿಂದ ರಾಜಕೀಯ ಕೂಡಿದೆ.

ಸಾಹಿತಿಗಳು ಇದನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ. ರಾಜಕಾರಣಿಗಳು ಹಣ, ಹೆಂಡ ಹಂಚುವುದು ಸಾಮಾನ್ಯವಾಗಿದೆ. ರಾಜಕಾರಣಿಗಳು ಮಾಡಿದ ತಪ್ಪನ್ನು ಸಾಹಿತಿಗಳು ಮಾಡಬಾರದು ಎಂದರು.

ಈ ಸಾಹಿತ್ಯ ಸಮ್ಮೇಳನದಲ್ಲಿ ಕೆಲವು ಸಾಹಿತಿಗಳನ್ನು ದೂರವಿಡಲಾಗಿದೆ. ಇದಕ್ಕಾಗಿ ಬೆಂಗಳೂರಿನಲ್ಲಿ ಪ್ರತ್ಯೇಕ ಸಮ್ಮೇಳನ ಮಾಡಲಾಗಿದೆ. ಆಮಂತ್ರಣ ಪತ್ರಿಕೆ ನೋಡಿದರೆ ಅದು ಸತ್ಯ ಎನ್ನಿಸುತ್ತದೆ. ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷರು ತಪ್ಪನ್ನು ತಿದ್ದಿಕೊಳ್ಳುವ ಕೆಲಸ ಮಾಡಬೇಕು ಎಂದು ಸಾಹಿತ್ಯ ಸಮ್ಮೇಳನದ ಸಮಾರೋಪದಲ್ಲಿ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.


Spread the love

By admin