ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರು ಪ್ರತಿಭಟನೆ ಕೈಗೊಂಡಿದ್ದು, ಇಂದಿನಿಂದ ಬಸ್ ಗಳನ್ನು ರಸ್ತೆಗೆ ಇಳಿಸದಿರಲು ತೀರ್ಮಾನಿಸಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರು ಪ್ರತಿಭಟನೆ ಕೈಗೊಂಡಿದ್ದಾರೆ.
ಆರು ತಿಂಗಳಿನಿಂದ ಸರಿಯಾಗಿ ಸಂಬಳ ನೀಡುತ್ತಿಲ್ಲ ಎಂದು ಪುಟ್ಟೇನಹಳ್ಳಿ ಬಿಎಂಟಿಸಿ ಘಟಕ 30ರಲ್ಲಿ ನೌಕರರು ಪ್ರತಿಭಟನೆ ಕೈಗೊಂಡಿದ್ದಾರೆ.
ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರು ಪ್ರತಿಭಟನೆ ಕೈಗೊಂಡಿರುವುದರಿಂದ ಇಂದು ಎಲೆಕ್ಟ್ರಿಕ್ ಬಸ್ ಗಳನ್ನು ರೋಡಿಗೆ ಇಳಿಸಲ್ಲ. ಬಸ್ ಚಾಲಕರು ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿದ್ದಾರೆ.