Spread the love

ಕಾನ್ಪುರ: ಇತ್ತಿಚಿಗೆ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವಿನ ಪ್ರಕರಣಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಲೇ ಇದೆ. ಕರೊನಾ ಬಳಿಕ ಚಿಕ್ಕ ಮಕ್ಕಳು, ಯುವ ಜನತೆಯಲ್ಲೂ ಹೃದಯಾಘಾತ ಕಾಣಿಸಿಕೊಳ್ಳುತ್ತಿದೆ. ಇದೀಗ ಉತ್ತರ ಪ್ರದೇಶದ ಕಾನ್ಪುರದಲ್ಲಿ ಒಂದೇ ವಾರದಲ್ಲಿ 98 ಮಂದಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.

 

ಕಳೆದ ಕೆಲ ದಿನಗಳಿಂದ ಉತ್ತರ ಪ್ರದೇಶದ ಕಾನ್ಪುರ ಭಾಗದಲ್ಲಿ ವಿಪರೀತ ಚಳಿ ಇದೆ. ಭೀಕರ ಚಳಿಯಿಂದ ಬಳಲುತ್ತಿದ್ದ 14 ರೋಗಿಗಳೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಲಕ್ಱ್ಮೀಪತ್​ ಸಿಂಘಾನಿಯಾ ಇನ್​ಸ್ಟಿಟ್ಯೂಟ್​ ಆಫ್​ ಕಾರ್ಡಿಯಾಲಜಿ ಮತ್ತು ಕಾರ್ಡಿಯಾಕ್​ ಸರ್ಜರಿ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಕಳೆದ ಒಂದು ವಾರದಲ್ಲಿ 723 ಹೃದ್ರೋಗಿಗಗಳು ಆಸ್ಪತ್ರೆಗೆ ತುರ್ತು ಮತ್ತು ಹೊರರೋಗಿ ವಿಭಾಗಕ್ಕೆ ದಾಖಲಾಗಿದ್ದಾರೆ. ಈ ಪೈಕಿ 98 ಜನರು ಮೃತಪಟ್ಟಿದ್ದಾರೆ.

ಮೃತರ ಪೈಕಿ 44 ಜನರು ಆಸ್ಪತ್ರೆಯಲ್ಲಿ ಮೃತಪಟ್ಟರೆ, ಇನ್ನುಳಿದವರು ಆಸ್ಪತ್ರೆಗೆ ಬರುವ ಮುನ್ನವೇ ಕೊನೆಯುಸಿರೆಳೆದಿದ್ದಾರೆ. ತೀವ್ರ ಚಳಿಯಿಂದ ಬಳಲುತ್ತಿದ್ದ 14 ರೋಗಿಗಳು ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಪೈಕಿ 6 ಮಂದಿ ಹೃದ್ರೋಗ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಲೇ ಸಾವನ್ನಪ್ಪಿದ್ದಾರೆ. ಸದ್ಯ ಹೃದ್ರೋಗ ಸಂಸ್ಥೆಯಲ್ಲಿ ಒಟ್ಟು 604 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾ


Spread the love

By admin