Spread the love

ಧಾರವಾಡ: ಮೆಟ್ರೋ ಪಿಲ್ಲರ್ ನಿರ್ಮಾಣಕ್ಕೆ ಕಟ್ಟಲಾಗಿದ್ದ ಕಬ್ಬಿಣದ ರಾಡ್ ಬಿದ್ದು ತಾಯಿ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 10 ಲಕ್ಷ ಹಾಗೂ ಬಿಎಂ ಆರ್ ಸಿ ಎಲ್ ನಿಂದ 20 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.

 

ಧಾರವಾಡದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್ ನಿರ್ಮಾಣದ ಕಬ್ಬಿಣದ ರಾಡ್ ಬಿದ್ದು ತಾಯಿ, ಮಗು ಸಾವನ್ನಪ್ಪಿರುವ ಘಟನೆ ಬಗ್ಗೆ ಖೇದ ವ್ಯಕ್ತಪಡಿಸಿದರು. ಮೃತರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗುವುದು ಎಂದರು.

ಈಗಾಗಲೇ ಬಿ ಎಂ ಆರ್ ಸಿ ಎಲ್, 20 ಲಕ್ಷ ಪರಿಹಾರ ಘೋಷಿಸಿದ್ದು, ದುರಂತಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಿದೆ. ಅಲ್ಲದೇ ಮೆಟ್ರೋ ಫೇಸ್ 2ರ ಬ್ಲೂ ಲೇನ್ ಕಾಮಗಾರಿಯನ್ನು ಮೂರು ದಿನಗಳ ಕಾಲ ಸ್ಥಗಿತಗೊಳಿಸುವಂತೆ ಸೂಚಿಸಿದೆ.


Spread the love

By admin