ಸಿದ್ದಿಪೇಟೆ: ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯ ಜಗದೇವಪುರದ ಮುನಿಗಡಪದ ಮಲ್ಲಣ್ಣ ದೇವಸ್ಥಾನದ ಬಳಿ ಮಂಗಳವಾರ ಕಾರು ನಿಯಂತ್ರಣ ತಪ್ಪಿ ಕೆಎಲ್‌ಐಎಸ್ ಕಾಲುವೆಗೆ ಉರುಳಿ ಒಂದೇ ಕುಟುಂಬದ ಐವರು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಸ್ಥಳೀಯರ ಪ್ರಕಾರ, ಮಾರುತಿ ಆಲ್ಟೋ ಕಾರಿನಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಹುಡುಗ ಸೇರಿದಂತೆ ಆರು ಮಂದಿ ಪ್ರಯಾಣಿಸುತ್ತಿದ್ದರು.
ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಕಾರಿನಿಂದ ಐದು ಮೃತದೇಹಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದು, ಓರ್ವ ಪ್ರಯಾಣಿಕನಿಗೆ ಗಂಭೀರ ಗಾಯಗಳಾಗಿದ್ದು, ಗಜ್ವೇಲ್‌ನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.