Spread the love

ಬೆಂಗಳೂರು: ಸಂಚಾರ ದಟ್ಟಣೆ ಮಧ್ಯೆ ಗೋಲ್ಡನ್ ಅವಧಿಯಲ್ಲಿ ರೋಗಿಗಳು ಅಥವಾ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸುವಾಗ ಆಯಂಬುಲೆನ್ಸ್‌ಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ‘ವಿಶೇಷ ತುರ್ತು ಪ್ರತಿಕ್ರಿಯೆ ಮೇಜಿನ ಸೇವೆ’ ಆರಂಭಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಸಂಬಂಧ ಭಾರತ್ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಆಶೋಕ್ ಎಸ್. ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ವಿಚಾರಣೆಗೆ ಹಾಜರಾದ ಸರ್ಕಾರಿ ವಕೀಲರಾದ ಪ್ರತಿಮಾ ಹೊನ್ನಾಪುರ, ಕರ್ನಾಟಕ ರಸ್ತೆ ಸುರಕ್ಷತೆ ಪ್ರಾಧಿಕಾರದ ಜಂಟಿ ಆಯುಕ್ತ ಜೆ. ಪುರುಷೋತ್ತಮ್ ಮತ್ತು ರಾಜ್ಯ ಆರೋಗ್ಯ ಹಾಗೂ ಕಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಉಪ ಕಾರ್ಯದರ್ಶಿ ನಾಗರಾಜ್ ಸಲ್ಲಿಸಿರುವ ಪ್ರತ್ಯೇಕ ಪ್ರಮಾಣ ಪತ್ರ ಸಲ್ಲಿಸಿದರು.

ವಾಹನ ಸಾಫ್ಟ್‌ವೇರ್: ಹೊಸ ಆಂಬ್ಯುಲೆನ್ಸ್​ ನೋಂದಣಿಗೆ ಜಿಪಿಎಸ್ ಉಪಕರಣ ಅಳವಡಿಕೆ ಕಡ್ಡಾಯ ಮಾಡಲಾಗಿದೆ. ‘ವಾಹನ ಸಾಫ್ಟ್‌ವೇರ್’ ಆಂಬ್ಯುಲೆನ್ಸ್​ನಲ್ಲಿ ಜಿಪಿಎಸ್ ದತ್ತಾಂಶದ ಕುರಿತು ನಿರ್ವಹಣೆ ಮಾಡಲಾಗುವುದು ಮತ್ತು ಅದನ್ನು ಕಾಲಕಾಲಕ್ಕೆ ಪರಿಶೀಲಿಸಲಾಗುವುದು. ಇನ್ನೂ 108 ಸೇವಾದಾರರನ್ನು ಆಯ್ಕೆ ಮಾಡಲು 21 ದಿನಗಳ ಅಲ್ಪಾವಧಿ ಟೆಂಡರ್ ಕರೆಯಲು ಸರ್ಕಾರ ಅನುಮತಿ ನೀಡಿದೆ.

ಸ್ಥಿರ ದೂರವಾಣಿ ಸಂಖ್ಯೆಯ ವ್ಯವಸ್ಥೆ: ಅದರಂತೆ ಜನವರಿ 9 ರಂದು ಟೆಂಡರ್ ಆಹ್ವಾನಿಸಲಾಗುವುದು. ಫೆಬ್ರವರಿ 2 ರಂದು ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ. ಆಯಂಬುಲೆನ್ಸ್‌ಗಳು ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಳ್ಳುವುದನ್ನು ತಪ್ಪಿಸಲು ಸಂಚಾರ ಪೊಲೀಸರಯಿಂದ ‘ವಿಶೇಷ ತುರ್ತು ಪ್ರತಿಕ್ರಿಯೆ ಮೇಜಿನ ಸೇವೆ’ (ಇಆರ್‌ಎಸ್‌ಎಸ್) ಮತ್ತು ಸ್ಥಿರ ದೂರವಾಣಿ ಸಂಖ್ಯೆಯ ವ್ಯವಸ್ಥೆ ಮಾಡಲಾಗಿದೆ.


Spread the love

By admin