Spread the love

ಬೆಂಗಳೂರು: ನಿರುದ್ಯೋಗ, ಸರ್ಕಾರಿ ನೇಮಕಾತಿಗಳಲ್ಲಿ ಭ್ರಷ್ಟಾಚಾರ, ಶಿಕ್ಷಣ ಕ್ಷೇತ್ರದ ನಿರ್ಲಕ್ಷ್ಯ ಮತ್ತು ಕೋಮುಗಲಭೆಗಳಿಗೆ ರಾಜ್ಯ ಬಲಿಯಾಗುತ್ತಿದೆ.

ಇಂಥ ಸಂದರ್ಭದಲ್ಲಿ ಯುವ ಸಮುದಾಯವನ್ನು ಅಣಕಿಸುವಂತೆ ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸಲು ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದು, ಅವರಿಗೆ ಸ್ವಾಗತ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.

ಸಣ್ಣ ಕೈಗಾರಿಕೆಗಳು ಮುಚ್ಚಿ ಹೋಗುತ್ತಿವೆ: ಕರ್ನಾಟಕದಲ್ಲಿ ಪ್ರಸ್ತುತ 25 ಲಕ್ಷಕ್ಕೂ ಹೆಚ್ಚು ನಿರುದ್ಯೋಗಿಗಳಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ 2.52 ಲಕ್ಷ ಉದ್ಯೋಗಗಳು ಖಾಲಿ ಬಿದ್ದಿವೆ. ಸರ್ಕಾರಿ ಶಾಲೆಗಳು ಮತ್ತು ಪಿಯು ಕಾಲೇಜುಗಳಲ್ಲಿ 53,700 ಹುದ್ದೆಗಳು ಭರ್ತಿಯಾಗಿಲ್ಲ. ಸಣ್ಣ ಕೈಗಾರಿಗಳು ಮುಚ್ಚಿಹೋದ ಕಾರಣ 83,190 ಪುರುಷರು ಮತ್ತು ಮಹಿಳೆಯರು ನಿರುದ್ಯೋಗಿಗಳಾಗಿದ್ದಾರೆ. ಈ ಸ್ಥಿತಿಯಲ್ಲಿ ಮೋದಿಯವರು ಯಾವ ಮುಖ ಹೊತ್ತು ಯುವಜನೋತ್ಸವ ಉದ್ಘಾಟಿಸಲು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ? ಅವರು ಉದ್ಘಾಟಿಸುತ್ತಿರುವುದು ಯುವಜನೋತ್ಸವವೇ? ಯುವಜನ ವಿನಾಶೋತ್ಸವವೇ?.

ನಿರುದ್ಯೋಗದಿಂದ ಆತ್ಮಹತ್ಯೆ ಹೆಚ್ತಿದೆ: ಪಿಎಸ್​​ಐ ನೇಮಕಾತಿ ಹಗರಣಕ್ಕೆ 1.29 ಲಕ್ಷ ಯುವಜನರು ಬಲಿಯಾಗಿದ್ದಾರೆ. ಎಇ ಮತ್ತು ಜೆಇ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳಿಂದಲೂ 50-80 ಲಕ್ಷ ರೂ ಸುಲಿಗೆ ಮಾಡಲಾಗಿದೆ. ರೈಲ್ವೆಯ ಭ್ರಷ್ಟ ಅಧಿಕಾರಿಗಳು ನೇಮಕಾತಿಯ ಸುಳ್ಳು ಭರವಸೆ ನೀಡಿ 22 ಕೋಟಿ ರೂ ಲೂಟಿ ಮಾಡಿದ್ದಾರೆ. ನಿರುದ್ಯೋಗದಿಂದ ಬೇಸತ್ತು ರಾಜ್ಯದಲ್ಲಿ 1,129 ವ್ಯಕ್ತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಅವರ ಸಹದ್ಯೋಗಿಗಳು ಆಗಾಗ ಗೊಣಗಾಡುತ್ತಿರುವ ಗುಜರಾತ್ ಮಾದರಿ ಎಂದರೆ ಇದೇ ಆಗಿರಬಹುದು.


Spread the love

By admin