Spread the love

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ವಲಸೆ ಪರ್ವ ಆರಂಭವಾಗಿದ್ದು, ಜೆಡಿಎಸ್ ನ ಮೂರ್ನಾಲ್ಕು ಶಾಸಕರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿರುವ ಮಧ್ಯೆ ಈಗ ಮತ್ತೊಬ್ಬ ಶಾಸಕರು ಕಾಂಗ್ರೆಸ್ ಸೇರುವುದಾಗಿ ತಿಳಿಸಿದ್ದಾರೆ.

 

ಪಕ್ಷೇತರ ಶಾಸಕ ಹೆಚ್. ನಾಗೇಶ್ ನಾಳೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ. ಸ್ವತಃ ನಾಗೇಶ್ ಅವರೇ ಗುರುವಾರದಂದು ಮುಳುಬಾಗಿನಲ್ಲಿ ಈ ಮಾಹಿತಿ ನೀಡಿದ್ದಾರೆ.

ಇದಕ್ಕೆ ಪೂರಕವಾಗಿ ಅವರು ಈಗಾಗಲೇ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಮಹದೇವಪುರದಿಂದ ಸ್ಪರ್ಧಿಸಲು ಬಯಸಿದ್ದಾರೆ ಎನ್ನಲಾಗಿದೆ.


Spread the love