ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯ ಜೂನ್ 30ರವರೆಗೆ ಎಂಬಿಬಿಎಸ್ ವಿದ್ಯಾರ್ಥಿಗಳ ಇಂಟರ್ ಶಿಪ್ ಅವಧಿ ವಿಸ್ತರಿಸಿದೆ.
ಈ ಕುರಿತಾಗಿ ಅಧಿಕೃತ ಆದೇಶ ಶೀಘ್ರವೇ ಹೊರಬೀಳುವ ಸಾಧ್ಯತೆ ಇದೆ. ಪೂರ್ವ ನಿಗದಿಯಂತೆ ಎಂಬಿಬಿಎಸ್ ವಿದ್ಯಾರ್ಥಿಗಳ ಇಂಟರ್ನ್ ಶಿಪ್ ಕಟ್ ಆಫ್ ದಿನಾಂಕ ಮಾರ್ಚ್ 31, 2023ಕ್ಕೆ ಮುಕ್ತಾಯವಾಗಬೇಕಿತ್ತು.
ಭಾರತೀಯ ವೈದ್ಯಕೀಯ ಸಂಘ, ವಿದ್ಯಾರ್ಥಿ ಸಂಘಟನೆಗಳು ಮತ್ತು ಕೆಲವು ರಾಜ್ಯ ಸರ್ಕಾರಗಳ ಮನವಿ ಮೇರೆಗೆ 2023ರ ಜೂನ್ 30ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ಇಂಟರ್ನ್ ಶಿಪ್ ಮುಕ್ತಾಯ ದಿನಾಂಕ ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ನೀಟ್ -ಪಿಜಿ ಪರೀಕ್ಷೆಯನ್ನು ಮುಂದೂಡಬಹುದಾದ ಸಾಧ್ಯತೆ ಇದೆ ಎಂದು ಹೇಳಲಾಗಿದೆ.