Spread the love

ವದೆಹಲಿ: ದೇಶದಲ್ಲಿ ರೂಪಾಂತರಿ ವೈರಸ್ BF.7 ಹಾಗೂ ಒಮಿಕ್ರಾನ್ ರೂಪಾಂತರಿ XBB 1.5 ಆತಂಕದ ನಡುವೆಯೇ ಕಳೆದ 24 ಗಂಟೆಯಲ್ಲಿ 197 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ‌

ನಿನ್ನೆ 170 ಜನರಲ್ಲಿ ಸೋಂಕು ಪತ್ತೆಯಾಗಿತ್ತು.

ಇದೀಗ ಒಂದೇ ದಿನದಲ್ಲಿ ಮತ್ತೆ 197 ಕೊರೊನಾ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.

24 ಗಂಟೆಯಲ್ಲಿ ಕೋವಿಡ್ ಮಹಾಮಾರಿಗೆ ಓರ್ವರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 5,30,725 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 2,257 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,47,775 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 49,597 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,16,25,966 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,94,968 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.


Spread the love

By admin