Spread the love

ಕೋಲಾರ: ಬಿಜೆಪಿ ಬೆಂಬಲಿತ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಹೆಚ್.ನಾಗೇಶ್ ತಾವು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದಾಗಿ ಖಚಿತಪಡಿಸಿದ್ದಾರೆ.

ಕೋಲಾರ ಜಿಲ್ಲೆ ಮುಳಬಾಗಿಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ನಾಗೇಶ್, ಜನವರಿ 14ರಂದು ನಾಳೆ ಸಂಕ್ರಾಂತಿಯಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ.

ಜನವರಿ 9ರಂದೇ ಅಂಬೇಡ್ಕರ್ ಅಭಿವೃದ್ದಿ ನಿಗಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.

ರಾಜೀನಾಮೆ ನೀಡಿರುವ ವಿಚಾರವನ್ನು ಈವರೆಗೂ ಯಾರ ಜೊತೆಗೂ ಚರ್ಚೆ ಮಾಡಿಲ್ಲ. ಸಧ್ಯಕ್ಕೆ ಬಿಜೆಪಿ ಸರ್ಕಾರದ ಬಗ್ಗೆ ಏನೂ ಮಾತನಾಡಲ್ಲ. ಕಾಂಗ್ರೆಸ್ ವರಿಷ್ಠರು ಯಾವ ಕ್ಷೇತ್ರ ಹೇಳ್ತಾರೋ ಆ ಕ್ಷೇತ್ರದಿಂದ ಸ್ಪರ್ಧೆ ಮಾಡ್ತೇನೆ ಎಂದರು.

ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ವಿಚಾರವಾಗಿ ಮಾತನಾಡಿದ ನಾಗೇಶ್, ಹೈಕಮಾಂಡ್ ಹೇಳುವವರೆಗೂ ಯಾವುದೂ ಅಂತಿಮವಲ್ಲ, ಇದು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲರಿಗೂ ಅನ್ವಯವಾಗುತ್ತದೆ ಎಂದು ಹೇಳಿದರು.


Spread the love

By admin