Spread the love

ವದೆಹಲಿ: ಸಂಸತ್ ಬಜೆಟ್ ಅಧಿವೇಶನ ಜನವರಿ 31 ರಂದು ಆರಂಭವಾಗಿ ಏಪ್ರಿಲ್ 6 ರವರೆಗೂ ನಡೆಯಲಿದೆ. ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ.

ಒಟ್ಟು 27 ದಿನಗಳ ಕಾಲ ಸಂಸತ್ ಬಜೆಟ್ ಅಧಿವೇಶನ ನಡೆಯಲಿದೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಶುಕ್ರವಾರ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸಂಸತ್ ಬಜೆಟ್ ಅಧಿವೇಶನ ಜನವರಿ 31 ರಿಂದ ಆರಂಭವಾಗಲಿದ್ದು, ಮೊದಲ ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಬಜೆಟ್ ಅಧಿವೇಶನದ ಮೊದಲ ಅವಧಿ ಫೆಬ್ರವರಿ 14ರಂದು ಮುಕ್ತಾಯವಾಗಲಿದೆ. ಒಂದು ತಿಂಗಳ ಬಿಡುವಿನ ಬಳಿಕ ಎರಡನೇ ಅವಧಿ ಮಾರ್ಚ್ 12ರಂದು ಆರಂಭವಾಗಿ ಏಪ್ರಿಲ್ 6ರವರೆಗೂ ನಡೆಯಲಿದೆ.


Spread the love

By admin