Spread the love

ಬೆಂಗಳೂರು: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಹೋರಾಟ ಹೊಸ ದಿಕ್ಕು ಪಡೆದುಕೊಂಡಿದೆ.ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಶುಕ್ರವಾರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದೆ.

ಇಂದಿನಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮೀಸಲಾತಿ ಸಿಗುವವರೆಗೆ ನಿರಂತರವಾಗಿ ಹೋರಾಟ ನಡೆಸಲು ನಿರ್ಧರಿಸಲಾಗಿದೆ.2ಡಿ ಮೀಸಲಾತಿ ಸಮಾಜದ ಅಸಮಾಧಾನಕ್ಕೆ ಕಾರಣವಾಗಿದ್ದು, ಅದನ್ನು ತಿರಸ್ಕರಿಸಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರು ಸಲ ಕೊಟ್ಟ ಮಾತು ತಪ್ಪಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ನಿರಂತರವಾಗಿ ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಅಣಿಯಾಗಿದ್ದೇವೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯ ಹಿಂದೆನಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಿರಂತರ ಪ್ರತಿಭಟನೆ ಕೈಗೊಂಡಿದೆ. ಹಿಂದುಳಿದ ವರ್ಗಗಳ ಆಯೋಗದ ಸಂಪೂರ್ಣ ವರದಿ ಕೈ ಸೇರಬೇಕು. ಸರ್ಕಾರ 2ಎ ಮೀಸಲಾತಿ ಘೋಷಿಸುವವರೆಗೂ ನಿರಂತರ ಹೋರಾಟ ನಡೆಸಲಾಗುವುದು ಎಂದು ಪಂಚಮಸಾಲಿ ಪೀಠಾಧಿಪತಿ ಜಯಮೃತುಂಜಯ ಸ್ವಾಮೀಜಿ ತಿಳಿಸಿದ್ದಾರೆ.


Spread the love

By admin